ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ



(ನ್ಯೂಸ್ ಕಡಬ) newskadaba.com ಜು. 02. ರಾಜ್ಯದ ಪತ್ರಕರ್ತರಿಗೆ ಸಿಹಿಸುದ್ದಿ ಎಂಬಂತೆ ಉಚಿತ ಬಸ್ ಪಾಸ್ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.







 

ಅವರು, ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಮಂಗಳವಾರದಂದು ಬೆಂಗಳೂರಿನ ವಾರ್ತಾಸೌಧದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ-2025 ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.






 

ಬಳಿಕ ಮಾತನಾಡಿದ ಅವರು, ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

error: Content is protected !!
Scroll to Top