ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..!

(ನ್ಯೂಸ್ ಕಡಬ) newskadaba.com ಜು. 02. ರಾಜ್ಯದಲ್ಲಿ ಇತ್ತೀಚೆಗಷ್ಟೇ ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಕುತೂಹಲ ಕೆರಳಿಸಿದೆ. ಅದರಂತೆ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ.

ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು. ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು ಎಂದು ಸೂಚಿಸಿದೆ.

ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ 67ರ ಸಬ್‌ ಸೆಕ್ಷನ್‌ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು. ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದಾಗಿದೆ. ಕೇಂದ್ರ ಸರ್ಕಾರದ ಈ ಆದೇಶದ ಬೆನ್ನಲ್ಲೇ ಬೈಕ್‌ ಟ್ಯಾಕ್ಸಿ ಅನುಮತಿಗೆ ಹೋರಾಟದ ಹಾದಿ ಹಿಡಿದಿದ್ದವರಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

Scroll to Top