ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ ರೂ.20000,  ಬಿ.ಎ/ಬಿ.ಕಾಂ/ಬಿ.ಎಸ್ಸಿ/ ಬಿ.ಎಡ್/ಬಿ.ಪಿ.ಎಡ್ ರೂ.25,000, ಸ್ನಾತ್ತಕೋತರ ಪದವಿಗಳಿಗೆ ರೂ.30000, ಅಗ್ರಿಕಲ್ಚರ್/ಇಂಜಿನಿಯರಿಂಗ್/ವೆಟರ್ನರಿ/ ವೈದ್ಯಕೀಯ ಕೋರ್ಸ್‍ ಗಳಿಗೆ ರೂ.35000 ಪ್ರೋತಾಹಧನ ನೀಡಲಾಗುತ್ತದೆ.
ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ https://swd.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗಾಗಿ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ (ಗ್ರೇಡ್-1&2), À ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಛೇರಿ ಸಂಪರ್ಕಿಸಬಹುದು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.







error: Content is protected !!
Scroll to Top