ಪುತ್ತೂರು ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟಿಗೆ ಕೊನೆಗೂ ತೆರೆ ► ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಬಹುತೇಕ ಖಚಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.07. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯ ಕಗ್ಗಂಟು ಕೊನೆಗೂ ಅಂತಿಮಗೊಂಡಿದ್ದು, ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಅಭ್ಯರ್ಥಿ ಸ್ಥಾನಕ್ಕೆ ಕ್ಷೇತ್ರ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸದಸ್ಯ, ಹಿರಿಯ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹಾಗೂ ಹಿಂದೂ ಸಂಘಟನಾ ನಾಯಕ ಅರುಣ್ ಕುಮಾರ್ ಪುತ್ತಿಲರವರ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತಾದರೂ, ಇದೀಗ ಸಂಜೀವ ಮಠಂದೂರುರವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ವರಿಷ್ಠರು ಎಪ್ರಿಲ್ 10 ರಂದು ಅಧಿಕೃತವಾಗಿ ಸಂಜೀವ ಮಠಂದೂರುರವರ ಹೆಸರನ್ನು ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಅಭ್ಯರ್ಥಿಯ ಆಯ್ಕೆಯ ವಿಚಾರದಲ್ಲಿ ಸಂಬಂಧಪಟ್ಟವರು ಯಾರೂ ತುಟಿ ಬಿಚ್ಚುತ್ತಿಲ್ಲವಾದರೂ, ಮೂರು ಬಣಗಳು ಸಾಮಾಜಿಕ ಜಾಲತಾಣಗಳಲ್ಲಿ ಪರ, ವಿರೋಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದೆ.

Also Read  ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್

error: Content is protected !!
Scroll to Top