ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ

crime, arrest, suspected


(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.





 

ಮನೆ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.






 

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.

error: Content is protected !!
Scroll to Top