ಅಲ್ಪಸಂಖ್ಯಾತರಿಂದ ವಿವಿಧ ಕೋರ್ಸ್‍ ಗಳಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್‍ ಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಡ್ಮಿಶನ್ ಲಿಂಕ್  https://minority.ksouportal.com ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ (ಸಹಾಯವಾಣಿ:9900667916/ 9113512565/ 9611418726/ 9900509959/ 9035395137/ 9900509959) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top