ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು- ಎಸ್ಪಿ ಸ್ಪಷ್ಟನೆ – News Kadaba

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು- ಎಸ್ಪಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ವರದಿಯ ಪ್ರಕಾರ ಈ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಅಪರಾಧ ಕೃತ್ಯಗಳು ನಡೆದಿದೆ. ತನಗೆ ಜೀವ ಬೆದರಿಕೆ ಒಡ್ಡಿ ಈ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ಪ್ರಸಕ್ತ ತನಗೆ ಪಾಪಪ್ರಜ್ಞೆ ಕಾಡುತ್ತಿದೆ. ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ಧವಿರುವುದಾಗಿ ದೂರುದಾರರು ತಿಳಿಸಿದ್ದಾರೆ. ಗುರುವಾರ ತನ್ನ ಕಚೇರಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಈ ಈ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದೆ. ದೂರುದಾರರು ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿಡುವಂತೆ ವಿನಂತಿಸಿಕೊಂಡ ಮೇರೆಗೆ ಅವರ ಬಗ್ಗೆ ಮಾಹಿತಿಯನ್ನು ನೀಡಲಾಗುವುದಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

 

ಈ ದೂರಿನ ಬಗ್ಗೆ ನ್ಯಾಯಾಲಯದಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ:39/2025,ಕಲಂ:211()ಬಿಎನ್‌ಎಸ್ ಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Scroll to Top