(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಆರೋಪಿ ಪುತ್ತೂರಿನ ಕೃಷ್ಣ ಜೆ ರಾವ್ ನನ್ನು ಬಂಧಿಸಿದ್ದಾರೆ.
ತನಿಖೆ ಚುರುಕುಗೊಳಿಸಿದ ಮಂಗಳೂರಿನ ಎಸ್ಪಿ, ಪೊಲೀಸರ ಶೀಘ್ರ ಕಾರ್ಯಚರಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಆರೋಪಿಯನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ ಪಡೆದುಕೊಂಡು ಆಗಮಿಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.









