(ನ್ಯೂಸ್ ಕಡಬ) newskadaba.com ಜು. 05. ಪ್ರಸ್ತುತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ, ಪುತ್ತೂರಿನ 18 ಶಾಲೆಗಳು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರುವಾಗಲಿದ್ದು, ಅದರಂತೆ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.
ಇದರೊಂದಿಗೆ ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2019ರಿಂದ 2024ರ ವರೆಗೆ ಜಿಲ್ಲೆಯಲ್ಲಿ ಒಟ್ಟು 120 ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣವನ್ನು ಸರ್ಕಾರ ಅನುಮೋದಿಸಿತ್ತು. ಇತ್ತೀಚೆಗೆ ಇನ್ನೂ ಮೂರು ಶಾಲೆಗಳನ್ನು ಸೇರಿಸಲಾಗಿದ್ದು, ಇದರೊಂದಿಗೆ ದ.ಕ.ದಲ್ಲಿ ದ್ವಿಭಾಷಾ ಮಾಧ್ಯಮ ಬೋಧನೆಯನ್ನು ನೀಡುವ ಒಟ್ಟು ಶಾಲೆಗಳ ಸಂಖ್ಯೆ 123ಕ್ಕೇರಿಕೆಯಾಗಿದೆ.









