(ನ್ಯೂಸ್ ಕಡಬ) newskadaba.com ರಾಂಬನ್, ಜು05. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರಿದ್ದ ಐದು ಬಸ್ ಗಳು ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಕನಿಷ್ಠ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಸ್ ಗಳು ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್ ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.










