(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಸುಲ್ಕೆರಿ ಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.
ಅವರು ಗಾರೆ ಕೆಲಸ ಮತ್ತು ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದು, ಮನೆಗೆ ಬಾರದೇ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋರ್ ಅವರ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ವೇಣೂರು ಪೋಲಿಸರು ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.








