ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ

Crime


(ನ್ಯೂಸ್ ಕಡಬ) newskadaba.com ಜು. 07. ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.







 

ಘಟನೆಗೆ ಸಂಬಂಧಿಸಿ ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






 

ವರದಿಯ ಪ್ರಕಾರ, ಹಲ್ಲೆಗೊಳಗಾದ ಯುವಕ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಹೀಗಾಗಿ ಯುವಕ​ ಆಕೆಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದು, ಈ ವಿಚಾರವನ್ನು ಯುವತಿ ತನ್ನ ಸ್ನೇಹಿತರಿಗೆ ತಿಳಿಸಿದ್ದಳು. ನಂತರ ಮಾತುಕತೆಗೆಂದು ಯುವಕನನ್ನು ಕರೆಸಿಕೊಂಡ ಗುಂಪೊಂದು,​ ಆತನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಹಲ್ಲೆಯ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

error: Content is protected !!
Scroll to Top