ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರ..!



(ನ್ಯೂಸ್ ಕಡಬ) newskadaba.com ಜು. 07.  ಬಿಬಿಎಂಪಿ ಸೇರಿದಂತೆ ವಿವಿಧ ಪಾಲಿಕೆಗಳ ನೌಕರರು ಫ್ರೀಡಂ ಪಾರ್ಕ್ ನಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.







ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್ ಆಗಲಿದ್ದು, ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅವರು ಸಾಮೂಹಿಕ ರಜೆ ಹಾಕಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ.






ಲಾಗ್‌ಸೇಫ್ ಹಾಜರಾತಿ ಪ್ರಕ್ರಿಯೆಯನ್ನ ರದ್ದು ಮಾಡಬೇಕು, ವಿವಿಧ ವಾರ್ಡ್ ಗಳಲ್ಲಿ ಖಾಲಿ ಇರುವ 6 ಸಾವಿರ ಹುದ್ದೆಗಳನ್ನ ಭರ್ತಿ ಮಾಡಬೇಕು. ಪಾಲಿಕೆ ನೌಕರರಿಗೆ ಆಗ್ತಿರೋ ಕೆಲಸದ ಒತ್ತಡ ಕಡಿಮೆ ಮಾಡಬೇಕು, ಪಾಲಿಕೆಯ ಶಿಕ್ಷಣ ವಿಭಾಗದಲ್ಲಿ ಪ್ರಾಂಶುಪಾಲರ ಮೇಲೆ ಆಗುತ್ತಿರುವ ಇಲಾಖಾ ವಿಚಾರಣೆಗಳನ್ನು ಕೈಬಿಡಬೇಕು. ಅಭಿಯಂತರರು, ಸಹಾಯಕ ಅಭಿಯಂತರರಿಗೆ ಮುಂಬಡ್ತಿ ನೀಡಬೇಕು. ಹೆಲ್ತ್ ಸೂಪರ್ ವೈಸರ್ ಗಳಿಗೆ ಉದ್ದಿಮೆ ಪರವಾನಗಿ ನೀಡಬೇಕು. ಕಾನೂನು ಬಾಹಿರವಾಗಿರುವ ಮಾರ್ಷಲ್ಸ್ ಹುದ್ದೆಗಳನ್ನ ರದ್ದುಗೊಳಿಸುವುದು ಇವರ ಪ್ರಮುಖ ಬೇಡಿಕೆಗಳಾಗಿವೆ.

ಬಿಬಿಎಂಪಿ, ಹುಬಳ್ಳಿ-ಧಾರವಾಡ, ತುಮಕೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು ಹಾಗೂ ಬೆಳಗಾಂ ಮಹಾನಗರ ಪಾಲಿಕೆ ನೌಕರರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿದುಬಂದಿದೆ.

error: Content is protected !!
Scroll to Top