ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 5  ಕೊನೆಯ ದಿನ. ದಕ್ಷಿಣ ಕನ್ನಡ  ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೊಂದಾಯಿತ ತಂಡವಾಗಿರಬೇಕು.
ನಿಗದಿತ ಅರ್ಜಿ ನಮೂನೆಯನ್ನು ಮಂಗಳೂರು ನೆಹರು ಮೈದಾನದ ಎದುರಿನ ಪಿಡಬ್ಲ್ಯೂಡಿ ಕಟ್ಟಡದ 2 ನೇ ಮಹಡಿಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಪಡೆದು, ದಾಖಲಾತಿಗಳನ್ನು ಲಗತ್ತಿಸಿ  ಸಲ್ಲಿಸಬೇಕು ಎಂದು ಇಲಾಖೆಯ  ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top