(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರು ಕೇರಳದಲ್ಲಿ ಇಂದು ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ.
ಅಲ್ಲದೇ ಬೇಡಿಕೆ ಈಡೇರಿಸದಿದ್ದಲ್ಲಿ ಜುಲೈ 23 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬಸ್ಸು ಮಾಲಕರ ಸಂಘ ಮುನ್ನೆಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳ ರಿಯಾಯಿತಿ ಪ್ರಯಾಣ ದರ ಕನಿಷ್ಠ 5 ರೂ.ಗೆ ಏರಿಸಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ.
ಮುಷ್ಕರದ ಬಗ್ಗೆ ಬಸ್ಸು ಮಾಲಕರ ಸಂಘದ ಮುಖಂಡರ ಜೊತೆ ಸಾರಿಗೆ ಆಯುಕ್ತರು ಮಾತುಕತೆ ನಡೆಸಿದರೂ ವಿಫಲ ಗೊಂಡಿದೆ. ಖಾಸಗಿ ಬಸ್ಸು ಮುಷ್ಕರದ ಹಿನ್ನಲೆಯಲ್ಲಿ ಕೆ ಎಸ್ ಆರ್ ಟಿ ಸಿ ಹೆಚ್ಚುವರಿ ಬಸ್ಸುಗಳನ್ನು ರಸ್ತೆಗಿಳಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಇತರ ಪ್ರಯಾಣಿಕರು ಮುಷ್ಕರದಿಂದ ಸಮಸ್ಯೆಗೆ ಸಿಲುಕಿದ್ದು, ಖಾಸಗಿ ವಾಹನಗಳನ್ನು ಅವಲಂಬಿಸುವಂತಾಗಿದೆ.










