ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..! – News Kadaba

ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..!

(ನ್ಯೂಸ್ ಕಡಬ) newskadaba.com ಜು. 08. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕೂಡಾ ಖಾಸಗಿ ಶಾಲೆಯವರ ಮಟ್ಟಕ್ಕೆ ಬೆಳೆಯಬೇಕು ಎಂಬ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಯೂನಿಟ್ ಟೆಸ್ಟ್ ಪದ್ಧತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಅಪರೂಪಕ್ಕೆ ಯೂನಿಟ್ ಟೆಸ್ಟ್ ಗಳನ್ನು ಮಾಡಲಾಗುತ್ತಿತ್ತು. ಆದರೆ ಇದೀಗ ಒಂದರಿಂದ ಹತ್ತನೇ ತರಗತಿಯವರೆಗೆ ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆ ಅನುಷ್ಠಾನಗೊಳಿಸಿದ್ದು, ಇದರ ಮೂಲಕ ಪ್ರತಿ ಅದ್ಯಾಯ ಅದ ಬಳಿಕ ಕಿರು ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕಿದೆ. ಆರಂಭದಿಂದಲೇ ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಿದಲ್ಲಿ ಮುಂಬರುವ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆಯಬಹುದೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಈ ಯೋಜನೆ ಜಾರಿಗೆ ಮುಂದಾಗಿದೆ.

ವಿದ್ಯಾರ್ಥಿಗಳಿಗೆ ಪ್ರತಿ ಅಧ್ಯಯನ ಮುಗಿದ ನಂತರ ಪರೀಕ್ಷೆ ಮಾಡುವುದರಿಂದ ಅರ್ಥೈಸಿಕೊಳ್ಳುವುದು, ಕಲಿಕೆಯ ಗುಣಮಟ್ಟದ ಬಗ್ಗೆ ಖಾತ್ರಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆಯನ್ನು ಜಾರಿಗೊಳಿಸಲಾಗಿದ್ದು, ಇದು ಪ್ರಸಕ್ತ 2025- 26ನೇ ಶೈಕ್ಷಣಿಕ ಸಾಲಿನಿಂದಲೇ ಇದು ಜಾರಿಗೆ ಬರಲಿದೆ.

ಪ್ರತಿ ಪರೀಕ್ಷೆ 30 ಅಂಕಗಳಿಗೆ ಮೀಸಲಾಗಿದ್ದು, 25 ಪ್ರಶ್ನೆಗಳು ಇರುತ್ತವೆ. ಇವುಗಳಲ್ಲಿ ಸುಲಭ ಶೇಕಡ 75, ಸಾಮಾನ್ಯ ಶೇಕಡ 25, ಕಠಿಣ ಶೇಕಡ 10 ಎನ್ನುವ ಮಾದರಿಯಲ್ಲಿ ಪ್ರಶ್ನೆಗಳನ್ನು ವಿಭಜಿಸಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುವುದು. ಬಹುತೇಕ ಪ್ರಶ್ನೆಗಳು ಬಹು ಆಯ್ಕೆ ಮಾದರಿಗಳಿಂದ ಕೂಡಿರುತ್ತದೆ.

Scroll to Top