ಪೆರ್ನೋಡಿ: ಇನ್ನೋವಾ – ಓಮ್ನಿ ಮುಖಾಮುಖಿ ಢಿಕ್ಕಿ ► ತಾಯಿ, ಮಗ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಎ.09. ಓಮ್ನಿ ಹಾಗೂ ಇನ್ನೋವಾ ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ – ಮಗ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ನೆಲ್ಲಿಕಾರು ಎಂಬಲ್ಲಿ ಸೋಮವಾರದಂದು ನಡೆದಿದೆ.

ಮೃತರನ್ನು ಶಿವಮೊಗ್ಗ ಮೂಲದ ಸೋಮಶೇಖರ್(45) ಹಾಗೂ ಅವರ ತಾಯಿ ರತ್ನಮ್ಮ(70) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ್ಮಾರು ಸಂಪರ್ಕ ರಸ್ತೆಯ ಪೆರ್ನೋಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

error: Content is protected !!
Scroll to Top