(ನ್ಯೂಸ್ ಕಡಬ) newskadaba.com, ಜು. 10. ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್‌ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ ಜುಲೈ 12 ರಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 7 ಅಗ್ನಿಶಾಮಕ ದಳದವರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.














