ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ – News Kadaba

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಸಂದರ್ಭ ದಾರಿ ಮಧ್ಯೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ, ಓರ್ವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತ್ಯಾಜ್ಯ ತೈಲ ಸಂಗ್ರಹ ಟ್ಯಾಂಕ್‌ನಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದ್ದು. ಕಾರ್ಮಿರಲ್ಲಿ ಒಬ್ಬರು ಕನ್ನಡಿಗರಾಗಿದ್ದು, ಇಬ್ಬರು ಹೊರರಾಜ್ಯದವರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top