ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..?



(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್‌ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್‌ ಹೌಸ್‌ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್​ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ.





ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ತಮ್ಮ ಕೊಡುಗೆ ನೀಡಲು ಸಜ್ಜಾಗಿದ್ದಾರೆ. ಈ ಪ್ರೊಡಕ್ಷನ್ ಹೌಸ್‌ನಿಂದ ಎರಡು ಕನ್ನಡ ಚಿತ್ರಗಳು ಈಗಾಗಲೇ ನಿರ್ಮಾಣ ಹಂತದಲ್ಲಿದ್ದು, ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ರಮೇಶ್ ಅರವಿಂದ್, ಗೋಲ್ಡನ್ ಸ್ಟಾರ್ ಗಣೇಶ್, ಮತ್ತು ಡಾಲಿ ಧನಂಜಯ್ ಈ ಚಿತ್ರಗಳಲ್ಲಿ ಅಭಿನಯಿಸುತ್ತಾರೆ ಎಂದು ಹೇಳಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿಲ್ಲ. ಈ ಪ್ರೊಡಕ್ಷನ್ ಹೌಸ್‌ನ ಮೊದಲ ಯೋಜನೆಯಾಗಿ ಎರಡು ಕನ್ನಡ ಚಿತ್ರಗಳ ನಿರ್ಮಾಣ ಈಗಾಗಲೇ ಆರಂಭವಾಗಿದೆ ಎಂದು ಹೇಳಲಾಗಿದೆ.






error: Content is protected !!
Scroll to Top