ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ – News Kadaba

ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

(ನ್ಯೂಸ್ ಕಡಬ) newskadaba.com, ಜು. 14. ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.

Scroll to Top