(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಖ್ಯಾತ ನಟ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ಹಾಗೂ ರಾಜ್ ಬಿ ಶೆಟ್ಟಿ ಅವರು ನಿರ್ಮಾಣ ಮಾಡಿರುವ ಹಾಗೂ ಜೆಪಿ ತುಮಿನಾಡು ನಿರ್ದೇಶನದ ʼಸು ಫ್ರಮ್ ಸೋʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ʼಡ್ಯಾಂಕ್ಸ್ ಅಂಥಮ್; ಹಾಡಿಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಕಾಮಿಡಿ ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರ ಜುಲೈ 25 ರಂದು ತೆರೆಗೆ ಬರಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.












