ಕಾಡಾನೆ ದಾಳಿ- ವ್ಯಕ್ತಿ ಮೃತ್ಯು..!



(ನ್ಯೂಸ್ ಕಡಬ) newskadaba.com ಜು. 17. ಕಾಡಾನೆ ದಾಳಿಯಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ನಡೆದಿದೆ.





 

ಮೃತರನ್ನು ಸೌತಡ್ಕ ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ನಡೆದುಕೊಂಡು ಹೋಗುತ್ತಿದ್ದ ಬಾಲಕೃಷ್ಣರನ್ನು ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿದ್ದು, ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.






ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.‌

error: Content is protected !!
Scroll to Top