ದರ್ಶನ್‌ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಜು.22ಕ್ಕೆ ಸುಪ್ರೀಂನಲ್ಲಿ ವಿಚಾರಣೆ



(ನ್ಯೂಸ್ ಕಡಬ) newskadaba.com,ಜು .17. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್‌ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ಜು.22ಕ್ಕೆ ಮುಂದೂಡಿದೆ.





ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠವು ಚಿತ್ರನಟ ದರ್ಶನ್‌ ಹಾಗೂ ಇತರೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಕಾರಣಗಳನ್ನು ಮಾತ್ರ ಹೇಳಿ. ನಾವು ಬೇರೆ ಯಾವುದನ್ನೂ ಕೇಳುತ್ತಿಲ್ಲ ಎಂದು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು.






ದರ್ಶನ್‌ ಹಾಗೂ ಆರೋಪಿಗಳ ಬಂಧನ ಕಾನೂನುಬದ್ಧವಾಗಿಲ್ಲ ಎನ್ನುವುದಾದರೆ ಅದಕ್ಕೆ ಉತ್ತರ ಕೊಡಿ ಎಂದು ಸರ್ಕಾರದ ಪರ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿ ಜು.22 ಕ್ಕೆ ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದೆ.ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥಾ ವಾದ ಮಂಡಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್‌ ಪರ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ ಹಾಜರಿದ್ದರು.

error: Content is protected !!
Scroll to Top