ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ



(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.







ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.  ಇದೇ ವೇಳೆ ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.






ನಗರ ಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಳಿನ ಕಾರ್ಯಕ್ರಮ ಯಾರದೇ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಅದು ಅಭಿವೃದ್ಧಿಯ ಕಾರ್ಯಕ್ರಮ ಎಂದರು.

 

error: Content is protected !!
Scroll to Top