ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ – News Kadaba

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ

(ನ್ಯೂಸ್ ಕಡಬ) com ಜು. 19. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು” ಎಂದು ತಿಳಿಸಿದ್ದಾರೆ.

“ಮಧ್ಯಾಹ್ನದಿಂದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಅನೇಕ ಗುಂಡಿನ ಚಕಮಕಿಗಳು ನಡೆದಿವೆ. ಇಲ್ಲಿಯವರೆಗೆ ಎನ್‌ಕೌಂಟರ್ ಸ್ಥಳದಿಂದ 6 ಮಾವೋವಾದಿಗಳ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೇ, ಎಕೆ-47 ಸೇರಿದಂತೆ ಇತರ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದಿನನಿತ್ಯ ಬಳಸುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ” ಎಂದರು.

Scroll to Top