ಇಂದಿನಿಂದ (ಜು.21) ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಅದನ್ನು ದುರಸ್ತಿಪಡಿಸುವ ಸಲುವಾಗಿ ಇಂದಿನಿಂದ (ಜು.21ರ) ರಾತ್ರಿ 8ರಿಂದ ಜು.24ರ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿರುವ ಕುರಿತು ವರದಿಯಾಗಿದೆ.

ಈ ರಸ್ತೆಯು ಸಾರ್ವಜನಿಕರ, ವಾಹನ ಸವಾರರ ಓಡಾಟಕ್ಕೆ ತೊಡಕಾಗಿದ್ದು, ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ ಮಳೆಯಿಂದಾಗಿ ರಸ್ತೆ ಮತ್ತೆ ಮತ್ತೆ ಹಾಳಾಗುತ್ತಿದೆ.

 

ಸದ್ಯ ಡಾಮಾರೀಕರಣ ಅಸಾಧ್ಯವಾದ ಕಾರಣ ಪೇವರ್ ಬ್ಲಾಕ್‌ಗಳನ್ನು ಸರಿಪಡಿಸಲು ಮುಂದಾಗಿದ್ದು, ಹಾಗಾಗಿ ಸಾರ್ವಜನಿಕರು, ವಾಹನ ಸವಾರರು ಸಹಕರಿಸಬೇಕು ಎಂದು ಎನ್‌ಎಚ್‌ಎಐ ಮನವಿ ಮಾಡಿದೆ.

Scroll to Top