ಕೊಣಾಜೆ: ಯುವಕನಿಗೆ ಚೂರಿ ಇರಿತ ► ಆರೋಪಿ ಪರಾರಿ



(ನ್ಯೂಸ್ ಕಡಬ) newskadaba.com ಮಂಗಳೂರು, ಎ.12. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.







ಇರಿತಕ್ಕೊಳಗಾದ ಯುವಕನನ್ನು ನಾಟೆಕಲ್ ಸೈಟ್ ನಿವಾಸಿ ಇಬ್ರಾಹಿಂ ಖಲೀಲ್ ಎಂದು ಗುರುತಿಸಲಾಗಿದೆ. ಪೂರ್ವದ್ವೇಷಕ್ಕೆ ಸಂಬಂಧಿಸಿ ನಾಟೆಕಲ್ ನಿವಾಸಿ ಅಜ್ಮಲ್ ಎಂಬಾತ ಇಬ್ರಾಹಿಂ ಖಲೀಲ್ ಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಾಯಾಳುವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top