ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ



(ನ್ಯೂಸ್‌ ಕಡಬ) newskadaba.com ಜು. 22: ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುತ್ತಿದ್ದ 18 ವರ್ಷದ ಯುವತಿಯನ್ನು ಇಬ್ಬರು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ.





ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ಮತ್ತೊಂದು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಹಿಳಾ ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಅತ್ಯಚಾರ ನಡೆಸಲಾಗಿದೆ ಎಂದು ಸಂತ್ರಸ್ಥೆ ತಂದೆ ಪೊಲೀಸ್‌‍ ದೂರಿನಲ್ಲಿ ಆರೋಪಿಸಿದ್ದಾರೆ. ಆಕೆಯನ್ನು ಕೃಷಿಭೂಮಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಲಾಯಿತು, ಆದರೆ ಆಕೆಯ ಸ್ನೇಹಿತೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಅಪರಾಧಿಗಳನ್ನು ಬಂಧಿಸಲು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎಂದು ಜಗತ್ಸಿಂಗ್‌ಪುರದ ಬಿಜೆಪಿ ಶಾಸಕ ಅಮರೇಂದ್ರ ದಾಸ್‌‍ ಹೇಳಿದ್ದಾರೆ.






error: Content is protected !!
Scroll to Top