(ನ್ಯೂಸ್ ಕಡಬ) newskadaba.com ಜು.23: ಧರ್ಮಸ್ಥಳದ ಸನಿಹ ಬೆಳಾಲು ಗ್ರಾಮದ ಕುಕ್ಕೊಟ್ಟುವಿನ ವೀಣಾ(19) ಎನ್ನುವ ಯುವತಿ ಅನುಮಾನಸ್ಪದವಾಗಿ ಸಾವು ಕಂಡಿರುವ ಘಟನೆ ನಡೆದಿದೆ. ಕಳೆದ ಜುಲೈ 11 ರಂದು ವೀಣಾಳ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಧರ್ಮಸ್ಥಳ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೀಣಾ ಅವರು ಕಳೆದ ಮೇ.10ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ಆಕೆಯ ಪತ್ತೆಗಾಗಿ ಪ್ರಕಟಣೆ ಹೊರಡಿಸಿದ್ದರು. ಆದಾದ ಕೆಲವೇ ದಿನಗಳಲ್ಲಿ ಆಕೆ ಪತ್ತೆಯಾಗಿದ್ದರು. ಬಳಿಕ ಅವರು ಮನೆಯಲ್ಲಿದ್ದರು. ಈಗ ವೀಣಾ ಅವರ ಶವ ಕೆರೆಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್- ಭಾರತಿ ದಂಪತಿಗಳ ಎರಡನೇ ಪುತ್ರಿ ವೀಣಾ (19) ಎಂಬಾಕೆಯ ಶವ ಮನೆಯ ಕೆರೆಯಲ್ಲಿ ಜುಲೈ 11 ರಂದು ಮಧ್ಯಾಹ್ನದ ಬಳಿಕ ಪತ್ತೆಯಾಗಿದೆ.








