ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೇಸಿಗೆ ಶಿಬಿರ ಸಮರೋಪ

(ನ್ಯೂಸ್ ಕಡಬ) newskadaba.com ಕಡಬ ಎ.11. ಬೇಸಿಗೆ ರಜಾ ದಿನಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ಬೇಸಿಗೆ ಶಿಬಿರ ಪೂರಕ . ಶಿಬಿರದಲ್ಲಿ ಮಕ್ಕಳು ಭಾಗವಹಸಿ ತನ್ನ ಪ್ರತಿಭೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯೆ ತೇಜಶ್ವಿನಿ ಕಟ್ಟಪುಣಿ ಹೇಳಿದರು.

ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾನ್ವೇಷಣೆ ಹಾಗೂ ಬೇಸಿಗೆ ಶಿಬಿರ ಚಿಣ್ಣರಲೋಕ-2018 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಕಾರ್ಯದರ್ಶಿ ಸೇಸಪ್ಪ ರೈ ಮಾತನಾಡಿ, ತರಭೇತಿಯಲ್ಲಿ ಅಭ್ಯಸಿಸಿದ ಎಲ್ಲವೂ ಮುಂದಿನ ಜೀವನಕ್ಕೆ ಸಹಾಯಕವಾಗಲಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ನೃತ್ಯ, ಮೇಕಪ್, ರಂಗ ಕಲೆ ಹಾಗೂ ಕರಕುಶಲ ತರಬೇತಿಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು. ಸಾಮಾಜಿಕ ಉಪಯುಕ್ತ ವಸ್ತುಗಳ ತಯಾರಿಕೆಯ ಕುರಿತಾಗಿ ತರಬೇತಿ ನೀಡಿದ ಸುಮನಾ ಕೆರೆಕರೆ ಅವರಿಗೆ ಸನ್ಮಾನಿಸಲಾಯಿತು. ಪ್ರತಿಭಾನ್ವೇಷಣೆ ಹಾಗೂ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಪ್ರಾಥಮಿಕ ಕಿರಿಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಗಾಯತ್ರಿ ಯು.ಎನ್, ಶಾಲಾ ಆಡಳಿತಾಧಿಕಾರಿ ಆನಂದ ಎಸ್.ಟಿ, ಮೊದಲಾದವರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ದಿವ್ಯಶ್ರೀ ಆರ್.ಕೆ ವಂದಿಸಿದರು. ಧನ್ಯಾಶ್ರೀ ನಿರೂಪಿಸಿದರು.

Also Read  Benefits of a Business VDR

ಪ್ರತಿಭಾನ್ವೇಷಣೆ 2017-18 : ವಿದ್ಯಾರ್ಥಿ ವೇತನಕ್ಕೆ ಆಯ್ಕೆ
ಕಳೆದ ಹಲವಾರು ವರ್ಷಗಳಿಂದ ರಾಮಕುಂಜ , ಪೆರಾಬೆ, ಕೊೖಲ ಹಾಗೂ ಆಲಂಕಾರು ಕ್ಲಸ್ಟರಿನ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣಾ ಸ್ಪರ್ಧೆ ನಡೆಸಲಾಗುತ್ತಿದೆ. ಈ ಸಾಲಿನ ಪ್ರತಿಭಾನ್ವೇಷಣಾ ಸ್ಪರ್ಧೆಯಲ್ಲಿ ವಿಜೇತಗೊಂಡ ಹಿರಿಯ ಮತ್ತು ಕಿರಿಯ ವಿಭಾಗದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಯಿತು.

Also Read  ➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..!

error: Content is protected !!
Scroll to Top