ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ – ಬಿ.ವೈ ವಿಜಯೇಂದ್ರ



(ನ್ಯೂಸ್‌ ಕಡಬ) newskadaba.com ಜು.23: ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.







ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲ ವ್ಯಾಪಾರಿಗಳು ಅತ್ಯಂತ ಭಯ, ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.






error: Content is protected !!
Scroll to Top