ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಾರ್ನ್ ವಿಚಾರದಲ್ಲಿ ಆಕ್ರೋಶ- ಬಸ್ ಚಾಲಕನ ಮೇಲೆ ಹಲ್ಲೆ..! – News Kadaba

ಹಾರ್ನ್ ವಿಚಾರದಲ್ಲಿ ಆಕ್ರೋಶ- ಬಸ್ ಚಾಲಕನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 24. ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲ್ಮೆಟ್ ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ.

 

ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ರಿಯಾಝ್ ಅಹಮ್ಮದ್ ಅವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಹಲ್ಲೆಯನ್ನು ತಡೆಯಲು ಬಂದ ಬಸ್ಸಿನ ಪ್ರಯಾಣಿಕ ಅವಿನಾಶ್ ಎಂಬಾತನ ಮೇಲೂ ಹೆಲ್ಮೆಟ್‍ನಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಸ್ಸಿನ ಚಾಲಕ ಪೊಲೀಸರಿಗೆ ದೂರು ನೀಡಿದ್ದಾರೆ.

 

ಘಟನೆಯ ಬಗ್ಗೆ ದೂರು ಸ್ವೀಕರಿಸಿದ ಉಪ್ಪಿನಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕ ಗುರುನಾಥ್ ಹಾದಿಮನಿ ಕಾರ್ಯಾಚರಣೆ ನಡೆಸಿ ಒಂದು ಗಂಟೆಯೊಳಗೆ ಆರೋಪಿ ಬೈಕ್ ಸವಾರರಿಬ್ಬರನ್ನೂ ಪತ್ತೆ ಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.

Scroll to Top