(ನ್ಯೂಸ್ ಕಡಬ) newskadaba.com ಜು. 24. ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಮರಣದಂಡನೆಯ ಶಿಕ್ಷೆಗೆ ಒಳಗಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ ನ ಸಂಸ್ಥಾಪಕ ಡಾ. ಕೆ.ಎ. ಪೌಲ್ ಹೇಳಿದ್ದಾರೆ.
ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ, ಭಾರತೀಯ ಅಧಿಕಾರಿಗಳ ಹಸ್ತಕ್ಷೇಪದ ನಂತರ ಅದನ್ನು ಮುಂದೂಡಲಾಗಿತ್ತು.
ಈ ಪ್ರಕರಣದ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾದ ಮರಣದಂಡನೆಯನ್ನು ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನದ ನಂತರ ರದ್ದುಗೊಳಿಸಲಾಗಿದೆ ಎಂದು ಧರ್ಮ ಗುರು ಡಾ. ಕೆಎ ಪೌಲ್ ಮಂಗಳವಾರ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್‌ನ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ 2017ರಲ್ಲಿ ಯೆಮೆನ್ ಪ್ರಜೆಯ ಕೊಲೆಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಯಿತು. 2020ರಲ್ಲಿ ಅವರಿಗೆ ಯೆಮೆನ್ ನ್ಯಾಯಾಲಯವು ಮರಣದಂಡನೆ ವಿಧಿಸಿತು.










