ಸುಬ್ರಹ್ಮಣ್ಯ: ಆ್ಯಂಬುಲೆನ್ಸ್ ಚಾಲಕ ನಾಪತ್ತೆ ಶೋಧ ಕಾರ್ಯ ಆರಂಭ



(ನ್ಯೂಸ್ ಕಡಬ) newskadaba.com ಜು. 24. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ ಎಂಬವರು ಜುಲೈ 22 ರಂದು ನಾಪತ್ತೆಯಾಗಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ.





 

ಮೂಲಗಳ ಪ್ರಕಾರ, ಹೊನ್ನಪ್ಪ ಅವರು ಜುಲೈ 22 ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ಕಾಣೆಯಾಗಿದ್ದಾರೆ. ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಈ ಹಿನ್ನೆಲೆ ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಕುಮಾರಧಾರ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.






ಎಸ್‌ಡಿಆರ್‌ಎಫ್ ತಂಡ ಮತ್ತು ಈಜುಗಾರರ ತಂಡ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಕೂಡ ಶೋಧ ಕಾರ್ಯಕ್ಕೆ ಸಹಕರಿಸುತ್ತಿದ್ದಾರೆ.

error: Content is protected !!
Scroll to Top