ಡಿ.ದೇವರಾಜ ಅರಸು ಭವನದ  ನೂತನ ಕಟ್ಟಡ ಉದ್ಘಾಟನೆ ಇಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀ ಡಿ. ದೇವರಾಜ ಅರಸು ಭವನದ ನೂತನ ಕಟ್ಟಡ ಉದ್ಘಾಟನೆ, ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನೆ, ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ, ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ  ಜುಲೈ 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಉರ್ವಸ್ಟೋರ್‍ ನಲ್ಲಿ  ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

Scroll to Top