ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್ – News Kadaba

ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.

ಈ ಕುರಿತು ಗುರುವಾರದಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು. ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡಾ ಜನಸಾಮಾನ್ಯರಿಗೆ ಸಿಗಬೇಕು. ಹೀಗಾಗಿ ಕೆಂಪುಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಸರಕಾರಿ ದರದಲ್ಲಿ ಕೆಂಪು ಕಲ್ಲನ್ನು ಅಗತ್ಯ ಇರುವವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯು ನೂತನ ಆ್ಯಪ್ ಮೂಲಕ ಆಗಲಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಉಸ್ತುವಾರಿ ಸಚಿವರೊಂದಿಗೆ 2ನೇ ಹಂತದ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಅಧಿಕಾರಿಗಳು ವಹಿಸಬೇಕಾದ ಕ್ರಮಗಳ ಕುರಿತು ಸೂಚಿಸಲಾಗಿದೆ. ಹಾಗಾಗಿ ಈ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.

Scroll to Top