ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ

Death, deadbody, Waterfall


(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ಅವರ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ.





ಕಳೆದ ಮೂರು ದಿನಗಳ ಹಿಂದೆ ಚಾಲಕ ಹೊನ್ನಪ್ಪ ಅವರು ನಾಪತ್ತೆಯಾಗಿದ್ದು ಅವರಿಗಾಗಿ ಮೂರು ದಿನಗಳಿಂದ ಎಸ್.ಡಿ.ಆರ್.ಎಫ್, ಈಶ್ವರ್ ಮಲ್ಪೆ ತಂಡ, ಅಗ್ನಿ ಶಾಮಕ ತಂಡ ಹಾಗೂ ಅಂಬ್ಯುಲೆನ್ಸ್ ಚಾಲಕ ಮಾಲಕರ ತಂಡ ತೀವ್ರ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಇದೀಗ ಅವರ ಮೃತದೇಹವು ಕುಮಾರಧಾರ ನದಿ ಸೇತುವೆಯಿಂದ ಸುಮಾರು ಮೂರು ಕಿ.ಮೀ. ದೂರದಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಕಾರ್ಯಾಚರಣೆಗೆ ಗ್ರಾಮ ಪಂಚಾಯತ್ ಹಾಗೂ ಕುಕ್ಕೇ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ಸಂಪೂರ್ಣ ಸಹಕಾರ ನೀಡಿತ್ತು.






error: Content is protected !!
Scroll to Top