ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು

(ನ್ಯೂಸ್ ಕಡಬ) com ಜು. 26. ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಲೆಯ ಮೇಲ್ಛಾವಣಿ ಬೀಳುವ ಪರಿಸ್ಥಿತಿಯಲ್ಲಿದೆ ಎಂದು ಮೊದಲೇ ಎಚ್ಚರಿಸಲಾಗಿತ್ತು. ಆದರೆ ಶಿಕ್ಷಕರು ನಿರ್ಲಕ್ಷ ತೋರಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Scroll to Top