ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ

(ನ್ಯೂಸ್ ಕಡಬ) newskadaba.com ಜು. 26. ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ, ಇದೇ ವೇಳೆ ರಾಜ್ಯದಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ. ಆದರೂ, ಬೇಡಿಕೆ ಕಡಿಮೆಯಿರುವ ಜಿಲ್ಲೆಗಳಿಂದ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಗೊಬ್ಬರ ವರ್ಗಾವಣೆ ಮಾಡಿ ಸರಿದೂಗಿಸಲಾಗುತ್ತಿದೆ. ಹೀಗಾಗಿ ರೈತರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

 

Scroll to Top