‘ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ರಾಜ್ಯ ಸರ್ಕಾರ ವಿಳಂಬ ನೀತಿ’- ಕ್ಯಾ. ಚೌಟ



(ನ್ಯೂಸ್ ಕಡಬ) com ಜು. 26. ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಂದರು ಸಚಿವ ಸರ್ಬಾನಂದ ಸೋನೋವಾಲ್ ಅವರ ಗಮನಸೆಳೆದಿದ್ದಾರೆ.







ಸಂಸತ್ತಿನಲ್ಲಿ ನಿಯಮ 377ರಡಿ ವಿಷಯ ಪ್ರಸ್ತಾಪಿಸಿರುವ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಾಗರಮಾಲಾ-1 ಯೋಜನೆಯಡಿ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಣೆ ಹಾಗೂ ವ್ಯಾಪಾರ-ವಹಿವಾಟು ವೃದ್ಧಿಸುವ ಉದ್ದೇಶದಿಂದ ಮಂಗಳೂರಿನ ಹಳೇ ಬಂದರಿನಲ್ಲಿ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ 2022 ಘೋಷಣೆಯಾಗಿತ್ತು. 2023ರಲ್ಲಿ ಟೆಂಡರ್‌ ಪ್ರಕ್ರಿಯೆ ಕೂಡ ನಡೆದಿತ್ತು. ಆದರೆ, ಆ ಬಳಿಕ ಈ ಯೋಜನೆ ಅನುಷ್ಠಾನಕ್ಕೆ ಬರುವಲ್ಲಿ ಯಾವುದೇ ಆಡಳಿತಾತ್ಮಕ ಕ್ರಮಗಳಾಗಿಲ್ಲ ಎಂದು ಹೇಳಿದ್ದಾರೆ.






error: Content is protected !!
Scroll to Top