ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌



(ನ್ಯೂಸ್ ಕಡಬ) newskadaba.com, ಜು.‌ 29. ಮುಂಬಯಿ: ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. 8 ಜನರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.





ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡ್ರೋನ್‌ ಡ್ರಗ್ಸ್‌ ಸಿಕ್ಕಿತ್ತು. ಮೈಸೂರು ದಾಳಿ ನಂತರ 187 ಕೇಜಿ ಮೆಥೆಡ್ರೋನ್‌ ಡ್ರಗ್ಸ್‌ ಸಿಕ್ಕಿದ್ದು, ಅದರ ಮೌಲ್ಯ 382 ಕೋಟಿ ರುಪಾಯಿ. ಒಟ್ಟಾರೆ 390 ಕೋಟಿ ರು. ಮೌಲ್ಯದ 192 ಕೇಜಿ ಡ್ರಗ್ಸ್‌ ಇಡೀ ಪ್ರಕರಣದಲ್ಲಿ ಈವರೆಗೆ ಸಿಕ್ಕಿದೆ’ ಎಂದಿದ್ದಾರೆ.






‘ಈ ವರ್ಷದ ಏಪ್ರಿಲ್‌ನಲ್ಲಿ ಪಶ್ಚಿಮ ಮುಂಬೈನ ಸಾಕಿನಾಕಾದಲ್ಲಿ 52 ಗ್ರಾಂ ಮೆಫೆಡ್ರೋನ್‌ನೊಂದಿಗೆ ವ್ಯಕ್ತಿಯನ್ನು ಬಂಧಿಸಿದ ನಂತರ ಪ್ರಕರಣದ ತನಿಖೆ ಪ್ರಾರಂಭವಾಯಿತು ಮತ್ತು ಆತನ ವಿಚಾರಣೆಯ ಸಮಯದಲ್ಲಿ ಪೊಲೀಸರು ಇನ್ನೂ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಿದರು. ಅವರಿಂದ 8 ಕೋಟಿ ರು. ಮೌಲ್ಯದ 4.53 ಕಿಲೋಗ್ರಾಂ ಮೆಫೆಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

error: Content is protected !!
Scroll to Top