ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡ ವಿತರಣಾ ಕಾರ್ಯಕ್ರಮ



(ನ್ಯೂಸ್ ಕಡಬ) newskadaba.com ಜು. 29. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ವಲಯದ ರೆಂಜಿಲಾಡಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡ ವಿತರಣಾ ಕಾರ್ಯಕ್ರಮವು ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.







ಕಡಬ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಪರಿಸರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೇಂಜಿಲಾಡಿ ಒಕ್ಕೂಟದ ಅಧ್ಯಕ್ಷರಾದ ಜಯಾನಂದ, ಉಪಾಧ್ಯಕ್ಷರಾದ ಲಿಂಗಪ್ಪ, ಪದಾಧಿಕಾರಿಗಳಾದ ಶ್ರೀಮತಿ ಸವಿತಾ, ಶ್ರೀಮತಿ ಲಲಿತಾ, ಪ್ರಸಾದ್ ಮತ್ತು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಉಷಾರವರು ಉಪಸ್ಥಿತರಿದ್ದರು.






ಒಕ್ಕೂಟದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಸದಸ್ಯರಿಗೆ ಗಿಡ ವಿತರಿಸಲಾಯಿತು. ರೆಂಜಿಲಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಸುಗುಣ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಶ್ರೀಮತಿ ಲಲಿತಾ ವಂದಿಸಿದರು.

error: Content is protected !!
Scroll to Top