(ನ್ಯೂಸ್ ಕಡಬ) newskadaba.com, ಜು. 30. ಬರೋಬ್ಬರಿ 48 ಸೋಷಿಯಲ್ ಮೀಡಿಯಾ ಅಕೌಂಟ್‌ನಿಂದ ತಮಗೆ ಅಶ್ಲೀಲ ಮೆಸೇಜ್ ಬಂದಿರುವುದಾಗಿ ನಟಿ ರಮ್ಯಾ ದೂರು ನೀಡಿದ್ದು, ಅಶ್ಲೀಲ ಮೆಸೇಜ್ ಕಳುಹಿಸಿದವರಿಗೆ ಶಿಕ್ಷೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಟ ದರ್ಶನ್‌ಗೆ ಸಿಕ್ಕಿರೋ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ಅಭಿಪ್ರಾಯವನ್ನು ನಟಿ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನಿಂದ ಸಾಮಾನ್ಯರಿಗೆ ನ್ಯಾಯ ಸಿಗುತ್ತೆ ಅಂತ ನಂಬಿದ್ದು ನಿಜವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಗೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಇದರ ಬೆನ್ನಲ್ಲೇ ರಮ್ಯಾ ಆ ಮೆಸೇಜ್ ಗಳನ್ನು ಸ್ಕ್ರೀನ್ ಶಾಟ್ ತೆಗೆದು ಮತ್ತೆ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
ಸುಮಾರು 48 ಅಕೌಂಟ್‌ನಿಂದ ಬಂದಿದ್ದ ಅಶ್ಲೀಲ ಸಂದೇಶದ ವಿಚಾರವಾಗಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಆ ರೀತಿಯ ಸಂದೇಶ ಕಳುಹಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ದೂರು ನೀಡಿದ್ದಾರೆ. ಅವರಿಗೆ ಶಿಕ್ಷೆಯಾಗುವ ಮೂಲಕ ಸಮಾಜಕ್ಕೆ ದೊಡ್ಡ ಸಂದೇಶ ತಲುಪಬೇಕು ಎಂದು ತಿಳಿಸಿದ್ದಾರೆ.












