ವಿಟ್ಲ: ಅಪಘಾತದ ಗಾಯಾಳು ಮೃತ್ಯು



(ನ್ಯೂಸ್ ಕಡಬ) newskadaba.com ವಿಟ್ಲ, ಎ.12. ಪಿಕಪ್ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.







ಮೃತನನ್ನು ವಿಟ್ಲ ಗ್ರಾಮದ ಅಳಿಕೆ‌ ನಿವಾಸಿ ಆಟೋ ಚಾಲಕ ಹಸೈನಾರ್(31) ಎಂದು ಗುರುತಿಸಲಾಗಿದೆ. ಮಾರ್ಚ್ 26 ರಂದು ಹಸೈನಾರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಪಿಕಪ್ ವಾಹನದ ನಡುವೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಆಟೋ ಚಾಲಕ ಹಸೈನಾರ್, ಪತ್ನಿ ಹಾಗು ಮಗು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳ ಚಿಕಿತ್ಸೆಯ ನಂತರ ಪತ್ನಿ ಹಾಗೂ ಮಗು ಚೇತರಿಸಿಕೊಂಡಿದ್ದರಾದರೂ, ಹಸೈನಾರ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ.






error: Content is protected !!
Scroll to Top