ಮತಗಳ್ಳತನ: ‘ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ’- ಸಿಎಂ



(ನ್ಯೂಸ್ ಕಡಬ) newskadaba.com, ಜು. 31: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.







ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಲು ಬರುತ್ತಿದ್ದಾರೆ. ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.






ಇಂದು ಪ್ರತಿಭಟನೆ ರೂಪುರೇಷೆ ಸಂಬಂಧ ಸಭೆ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು. ಎಲ್ಲಿ ಮಾಡಬೇಕು ಎಂದು ಆ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

error: Content is protected !!
Scroll to Top