ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ



(ನ್ಯೂಸ್ ಕಡಬ) newskadaba.com ಕಡಬ, ಆ. 01. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ಬ್ಲಾಕ್ ಕಾರ್ಯಕರ್ತರ ಸಮಾವೇಶವು ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು.







ರಾಜ್ಯ, ಜಿಲ್ಲಾ ನಾಯಕರುಗಳ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಧ್ಯೇಯೋದ್ದೇಶ ಹಾಗೂ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಹಲವಾರು ಜನರು ಹೊಸತಾಗಿ ಪಕ್ಷಕ್ಕೆ ಸೇರ್ಪಡೆಯಾದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ರವರು ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಶಾಲು ಹೊದಿಸಿ ಬರಮಾಡಿಕೊಂಡರು.






ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಳಕೆಮಜಲು, ಸುಳ್ಯ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಹಾಗೂ ಕ್ಷೇತ್ರ ಮತ್ತು ಕಡಬ ಬ್ಲಾಕ್ ಮಟ್ಟದ ನಾಯಕರು ಉಪಸ್ಥಿತರಿದ್ದರು.

error: Content is protected !!
Scroll to Top