ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ



(ನ್ಯೂಸ್ ಕಡಬ) newdkadaba.com, ಆ. 02:ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.





ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.






ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್‌ಗಳನ್ನು ಸೇರಿಸಿ 48 ಅಕೌಂಟ್‌ಗಳ ಮೇಲೆ ದೂರು ದಾಖಲಿಸಿದ್ದರುಟೀ ಸಂಬಂಧ ಎಫ್‌ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‌ಗಳು ಡಿಲಿಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್‌ಗಳು ಅಕೌಂಟ್ ಡಿಟೇಲ್ಸ್ ನೀಡುವಂತೆ ಕೋರಿದ್ದರು.

ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್‌ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಇದೀಗ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ರಮ್ಯಾ ಅವರಿಗೆ ಅಶ್ಲೀಲ ಕಮೆಂಟ್ ಹಾಕಿ, ಅಕೌಂಟ್ ಡಿಲಿಟ್ ಮಾಡಿದವರನ್ನ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

error: Content is protected !!
Scroll to Top