(ನ್ಯೂಸ್ ಕಡಬ) newdkadaba.com, ಆ. 02: ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು(UDR)ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು ಶವಗಳನ್ನು ನನಗೆ ಹೂಳಿಸಲಾಗಿದೆಎಂದು ಆರೋಪಿ ಹೇಳಿರುವುದರಿಂದ ಈಗ ದಾಖಲೆಗಳ ನಾಶಪಡಿಸುವಿಕೆ ತೀವ್ರ ಕಳವಳಕ್ಕೆ ಕಾರಣವಾಗಿದೆ.
ಮರಣೋತ್ತರ ಪರೀಕ್ಷೆಯ ವರದಿಗಳು, ನೋಟಿಸ್‌ಗಳು ಮತ್ತು ಮೃತ ವ್ಯಕ್ತಿಗಳ ಗುರುತನ್ನು ಪತ್ತೆಹಚ್ಚುವ ಪ್ರಯತ್ನಗಳಲ್ಲಿ ಬಳಸಲಾದ ಫೋಟೋಗಳನ್ನು ಆಡಳಿತಾತ್ಮಕ ಆದೇಶಗಳಿಗೆ ಅನುಗುಣವಾಗಿ ನಾಶಪಡಿಸಲಾಗಿದೆ ಎಂದು ಪೊಲೀಸರು ಆರ್ ಟಿಐ ಅರ್ಜಿಗೆ ಪ್ರತಿಕ್ರಿಯಿಸಿದ್ದಾರೆ.








