(ನ್ಯೂಸ್ ಕಡಬ) newskadaba.com, ಆ.04: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯಿಂದ (ಆ.5) ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಆ.7ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 4 ದಿನ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.













